Monday , August 26 2019
Breaking News
Home / ರಾಷ್ಟ್ರೀಯ / ಇನ್ನು ಮುಂದೆ ಆಹಾರ ಪೋಲು ಮಾಡಿದರೆ ದಂಡ ಕಟ್ಟಬೇಕಾಗಬಹುದು

ಇನ್ನು ಮುಂದೆ ಆಹಾರ ಪೋಲು ಮಾಡಿದರೆ ದಂಡ ಕಟ್ಟಬೇಕಾಗಬಹುದು

ಸಂದೇಶ ಇ-ಮ್ಯಾಗಝಿನ್: ಆಹಾರಗಳನ್ನು ಪೋಲು ಮಾಡುವ ಹೊಟೇಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಮದುವೆ ಹಾಲ್ ಗಳಿಗೆ ಐದು ಲಕ್ಷದ ವರೆಗೆ ದಂಡ ವಿಧಿಸುವ ಕಾನೂನು ಜಾರಿಯಾಗುವ ಸಾಧ್ಯತೆ ಇದೆ. ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಈ ಬಗ್ಗೆ ಕರಡನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಇದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುವುದು. ಇತ್ತೀಚಿನ ದಿನಗಳಲ್ಲಿ ಹೊಟೇಲ್‌, ರೆಸ್ಟೋರೆಂಟ್ ಹಾಗೂ ಮದುವೆ ಹಾಲ್ ಗಳ ಆಹಾರದ ತ್ಯಾಜ್ಯಗಳು ಮಿತಿಮೀರುತ್ತಿದ್ದು, ಉಳಿದ ಆಹಾರಗಳನ್ನು ಎಲ್ಲಿ ಹೇಗೆ ಬಳಸಬಹುದು ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಇದರಿಂದಾಗಿ ಆಹಾರದ ಅತಿಯಾದ ಪೋಲು ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

ಕೆಲವು ಕಡೆಗಳಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮತ್ತು ವಿವಾಹಗಳಲ್ಲಿ ಉಳಿದಿರುವ ಆಹಾರವನ್ನು ಬಡವರಿಗೆ ವಿತರಿಸಲು ಅನೇಕ ಎನ್‌ಜಿಒಗಳು ಕಾರ್ಯನಿರ್ವಹಿಸುತ್ತಿವೆ, ಆದರೆ ಈ ಆಹಾರದ ಗುಣಮಟ್ಟದ ಬಗ್ಗೆ ಯಾವುದೇ ಮಾನದಂಡವಿಲ್ಲ. ಹೊಸ ಕರಡಿನಲ್ಲಿ ಈ ವಿಷಯದ ಬಗ್ಗೆ ವಿಶೇಷ ಗಮನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೊಸ ವ್ಯವಸ್ಥೆಯಲ್ಲಿ, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ವಿವಾಹಗಳ ಮಂಟಪಗಳ ನಿರ್ವಾಹಕರನ್ನು ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ದ ವೆಬ್‌ಸೈಟ್‌ನಲ್ಲಿ ನೋಂದಾಯಿಸಲಾಗುವುದು. ಅಧಿಕೃತ ಎನ್‌ಜಿಒಗಳಿಗೆ ಅಲ್ಲಿ ಉಳಿದ ಆಹಾರಗಳನ್ನು ವಿತರಿಸಲು ವ್ಯವಸ್ಥೆ ಮಾಡಲಾಗುವುದು.

Check Also

ಕೈರಾನಾ: ಬಿಜೆಪಿ ವರ್ತಕರನ್ನು ಬಹಿಷ್ಕರಿಸುವಂತೆ ಮುಸ್ಲಿಮರನ್ನು ಒತ್ತಾಯಿಸಿದ ಎಸ್ಪಿ ಮುಖಂಡ

000ಸಂದೇಶ ಇ-ಮ್ಯಾಗಝಿನ್: ಉತ್ತರ ಪ್ರದೇಶದ ಕೈರಾನಾದ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ನಹೀದ್ ಹಸನ್ ಅವರು ಈ ಪ್ರದೇಶದಲ್ಲಿ ವಾಸಿಸುವ …

Leave a Reply

Your email address will not be published. Required fields are marked *